ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಹಾಗೂ ಹಿಂಸೆಗಳು ಹೆಚ್ಚುತ್ತಿರುವುದನ್ನು ಡೀಡ್ಸ್ ಸಂಸ್ಥೆಯ ನಿರ್ದೇಶಕಿ ಮರ್ಲಿನ್ ಮಾರ್ಟಿಸ್ರವರು ಪ್ರಸ್ತಾಪಿಸಿದರು. ಇದನ್ನು ತಡೆಹಿಡಿಯುವ ನಿಟ್ಟಿನಲ್ಲಿ ಈ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಪ್ರಮುಖವಾಗಿ ಕೌಟುಂಬಿಕ ದೌರ್ಜನ್ಯ ಕಾಯ್ದೆ ಮತ್ತು ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಕಾಯ್ದೆಯಡಿಯಲ್ಲಿ ದೊರೆಯುವ ಕಾನೂನುಗಳ ಉಪಯುಕ್ತತೆ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶಿಲ್ಪಾರವರು ಕಾರ್ಯಕ್ರಮದಲ್ಲಿ ನುಡಿದರು. ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ ಮತ್ತು ತಿದ್ದುಪಡಿಯ ಕುರಿತು ಬಾಲಾಪರಾಧಿ ನ್ಯಾಯ ಮಂಡಳಿಯ ಸದಸ್ಯರಾದ ಶ್ರೀಮತಿ ಕಸ್ತೂರಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಡೀಡ್ಸ್ ಸಂಸ್ಥೆಯು ರೂಪಿಸಿರುವÀ ಪೂರಕ ಕಾನೂನು ತರಬೇತುದಾರರು ಭಾಗವಹಿಸಿದ್ದ್ದು, ಶೀಮತಿ ಗೌರಿ ವಕೀಲರು ಮತ್ತು ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು ಹಾಜರಿದ್ದರು.